ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ ಆಗಮಿಸಿತು.

ಸಂಸದೆರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರ ನಿಯೋಗವು ಬೆಳಿಗ್ಗೆ ಬೆಳಗಾವಿ ವಿಮಾನನಿಲ್ದಾಣಕ್ಕೆ ಬಂದಿಳಿದರು.
ಸತ್ಯಶೋಧನ ಸಮಿತಿ ನಿಯೋಗವು ಸಂತ್ರಸ್ತೆಯನ್ನು ಭೇಟಿ ಮಾಡಿ ಧೈರ್ಯ ಹೇಳುವುದಲ್ಲದೆ, ಘಟನೆಯ ಮಾಹಿತಿ ಪಡೆಯಲಿದೆ. ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ, ಜಿಲ್ಲಾಧ್ಯಕ್ಷರಾದ ಸಂಜಯ್ ಪಾಟೀಲ್, ಅನಿಲ್ ಬೆನಕೆ, ಪಕ್ಷದ ಪದಾಧಿಕಾರಿಗಳು ಸಮಿತಿಯ ಸದಸ್ಯೆರನ್ನ ಬರಮಾಡಿಕೊಂಡರು.