ಜಿಲ್ಲೆರಾಜಕೀಯರಾಜ್ಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಹಾಗೂ ಮಾಜಿ ಶಾಸಕಿ ಸೀಮಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಘಟನೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಗ್ಯಾರಂಟಿ ಹೆಸರು ಹೇಳಿಕೊಂಡು ದಿನಗಳ ದೂಡುತ್ತಿದೆ. ಹಲವಾರು ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿ ಮುಟ್ಟಿಲ್ಲವೆಂದು ಹೇಳುತ್ತಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಮುಖ್ಯವಾಗಿದೆ. ದಲಿತರ ಹಾಗೂ ಸಾಮಾನ್ಯ ಜನರ ಸುರಕ್ಷತೆ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಾಗಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ವಂಟಮೂರಿ ಘಟನೆಯ ಬಳಿಕ ಹೈ ಕೋರ್ಟ ಪೀಠವು ಕೂಡಾ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದೆ.  ಘಟನೆಯ ಕುರಿತು ಹೈಕೋರ್ಟ್​ ರಿಪೋರ್ಟ್ ಕೇಳಿದೆ. ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ಅಗ್ರಹಿಸಿದರು.

Comments (0)

Your email address will not be published. Required fields are marked *

Back to top button