ರಾಜಕೀಯರಾಜ್ಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕತ್ಯ: ಡಿ.ವಿ.ಸದಾನಂದಗೌಡ ಖಂಡನೆ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.


ಬೆಳಗಾವಿ ಘಟನೆಯನ್ನು ಖಂಡಿಸಿ ಬೆಂಗಳೂರಿನಲ್ಲಿಂದು ಮಹಿಳಾ ಮೋರ್ಚಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇಷ್ಟು ಕೆಟ್ಟ ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ, ಆಡಳಿತ ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿದೆ ಎಂದು ಟೀಕಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ರಾಜ್ಯದ ಆಡಳಿತವೇ ಬೇಡ ಎಂಬಂತಿದೆ. ಇನ್ನೊಂದೆಡೆ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಹೊಸ ಸಿಎಂ ಮಾಡಲು ಪ್ರಯತ್ನದಲ್ಲಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೊಂಡು ಸರ್ಕಾರ ಕೆಲಸ ಮಾಡ್ತಿಲ್ಲ. ಪರಮೇಶ್ವರ್, ಯಾವಾಗ ಎಚ್ಚೆತ್ತುಕೊಳ್ತಾರೋ ಅಲ್ಲಿವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಇಂದು ಬೆಳಗಾವಿಗೆ ಮಹಿಳಾ ಸಂಸದರ ನಿಯೋಗ ಕೂಡ ಭೇಟಿ ಕೊಟ್ಟಿದೆ. ನಾವು ಈಗಾಗಲೇ ಇದನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ. ಸೋಮವಾರ ನಡೆಯಲಿರುವ ಸಂಸತ್ ಅಧಿವೇಶನದಲ್ಲೂ ಇದನ್ನು ಪ್ರಸ್ತಾಪಿಸುತ್ತೇವೆ ಎಂದು ತಿಳಿಸಿದರು.
ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಲಾಯಿತು. ಇದೇವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

Comments (0)

Your email address will not be published. Required fields are marked *

Back to top button