ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮೂರನೇ ದಿನವೂ ಪ್ರತಿಭಟನೆಯ ಬಿಸಿ ತಟ್ಟಿದೆ. ಹಾವೇರಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿಯ ಸುವರ್ಣ ಗಾರ್ಡನ್ನಲ್ಲಿ 21 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್ ಮಾಡಲಾಗಿದೆ.

ಕಾರ್ಮಿಕರ ಸಂಘಗಳ ಪ್ರತಿನಿಧಿಗಳನ್ನು ಸಭೆಗೆ ಕರೆಯದೇ ಕಚೇರಿ ಆದೇಶ ಹೊರಡಿಸಿದ್ದನ್ನು ಕೈ ಬಿಡುವುದು ಹಾಗೂ ಕಟ್ಟಡ ಕಾರ್ಮಿಕರ ನಕಲಿ ಗುರುತಿನ ಚೀಟಿಗಳ ಬಗ್ಗೆ ಕ್ರಮ ಕೈಗೊಳ್ಳುಬೇಕು ಎಂದು ಆಕ್ರೋಶ ಹೊರಹಾಕಿದರು. ನಕಲಿ ಕಾರ್ಮಿಕರು ಎಷ್ಟು ಜನ ಹಣ ಪಡೆದಿದ್ದಾರೆನ್ನೋದರ ಬಗ್ಗೆ ತನಿಖೆ ನಡೆಸಬೇಕು. ಕಾರ್ಮಿಕ ಅಧಿಕಾರಿಗಳನ್ನ ಹೊರತುಪಡಿಸಿ ಬೇರೆ ಅಧಿಕಾರಿಗಳನ್ನು ನೇಮಿಸಿ ತನಿಖೆಗೆ ಆಗ್ರಹಿಸಿದರು. ವಿವಿಧ ಸಹಾಯಧನಗಳಿಗಾಗಿ ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ಮುಂದಿನ ಕ್ರಮಕ್ಕೆ ಆದೇಶ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಸಿದರು.


