ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು.

ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಆಶಾ ಲಾಕ್ರ, ಸಂಸದರ ನಿಯೋಗ ಹಾಗೂ ಜಿಲ್ಲಾ ಅಧ್ಯಕ್ಷರಾದ ಸಂಜಯ ಪಾಟೀಲ, ಚಿಕ್ಕೊಡಿ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ ಮಾಜಿ ಎಮ್.ಎಲ್.ಸಿ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಅನಿಲ ಬೆನಕೆ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಬಸವರಾಜ ಹುಂದ್ರಿ ಎಫ್.ಎಸ್.ಸಿದ್ದನಗೌಡರ, ನೀತಿನ ಚೌಗಲೆ ಹಾಗೂ ಪದಾಧಿಕಾರಿಗಳು ಹಾಜರಿದ್ದರು. ಕೇಂದ್ರ ಸಂಸದೆಯರು ಮನೆ ಮನೆಗೆ ತೆರಳಿ ಹಾಗೂ ಸಂತ್ರಸ್ಥೆಯನ್ನು ಕಟ್ಟಿ ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.