Wednesday, June 25, 2025
27.9 C
Bengaluru
Google search engine
LIVE
ಮನೆ#Exclusive NewsTop Newsಬೋರ್ಡ್ ಪರೀಕ್ಷೆ ಯಾವಾಗ? ಹೈಕೋರ್ಟ್ ವಿಚಾರಣೆ ವೇಳೆ ಏನಾಯ್ತು?

ಬೋರ್ಡ್ ಪರೀಕ್ಷೆ ಯಾವಾಗ? ಹೈಕೋರ್ಟ್ ವಿಚಾರಣೆ ವೇಳೆ ಏನಾಯ್ತು?

ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. 10 ಮತ್ತು 12ನೇ ತರಗತಿ ಮಕ್ಕಳಿಗೆ ನಡೆಸುವ ಪರೀಕ್ಷೆಯ ರೀತಿ ಎಂದು ಇದನ್ನು ತಿಳಿಯಬಾರದು. ಮಕ್ಕಳು ಹಲವು ದಿನಗಳಿಂದ ಸಿದ್ಧತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುತ್ತಾರೆ. ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್‌ 145ರ ಅಡಿ ಯಾವುದೇ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಬೇಕಿಲ್ಲ

ಎಂದು ರಾಜ್ಯ ಸರ್ಕಾರದ ಪ್ರತಿನಿಧಿ ಎಎಜಿ ವಿಕ್ರಮ್‌ ಹುಯಿಲಗೋಳ ವಾದ ಮಂಡಿಸಿದರು. ಆದರೆ,

ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಆರ್‌ಟಿಇ ಕಾಯಿದೆ ಸೆಕ್ಷನ್‌ 30ರ ಅಡಿ ಸಣ್ಣ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿಸುವುದಿಲ್ಲ. ಯಾವುದೇ ನಿಯಮ ಪಾಲಿಸದೇ ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್‌ 22ರ ಅಡಿ ಸರ್ಕಾರವು ಈ ಪರೀಕ್ಷೆ ನಡೆಸಲು ಅಧಿಸೂಚನೆ ಪ್ರಕಟಿಸಿದೆ. ಸರ್ಕಾರದ ನಡೆಯಿಂದ ವಿದ್ಯಾರ್ಥಿಗಳ ಪೋಷಕರ ಹಕ್ಕು ಮೊಟಕಾಗಿದೆ

ಎಂದು ಪ್ರತಿವಾದಿಗಳ ಪರ ವಕೀಲ ಎ ವೇಲನ್,‌ ಕೆ ವಿ ಧನಂಜಯ ಪ್ರತಿವಾದ ಮಾಡಿದರು.

ಪ್ರಕರಣದ ಹಿನ್ನೆಲೆ ಏನು?

ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತ್ಶಿತು. ಆದರೆ, ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದು ನಂತರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.  ಹೈಕೋರ್ಟ್ ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್, ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಆದೇಶಿಸಿತ್ತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments