bengaluru

ಭಾನುವಾರದಂದು ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ!

Purple line metro travel may halt for 2 hours

ಬೆಂಗಳೂರು: ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಈ ಭಾನುವಾರ ಬೆಳಿಗ್ಗೆ ನೇರಳೆ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಮೆಟ್ರೋ ವೇಳಾಪಟ್ಟಿಯನ್ನು ಗಮನಿಸಿಕೊಂಡು ಮನೆಯಿಂದ ಹೊರಡಬೇಕಿದೆ. ಮೆಟ್ರೋ ಹಳಿಗಳ ಸುರಕ್ಷತೆ ಮತ್ತು ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.

ವ್ಯತ್ಯಯ ಎಲ್ಲೆಲ್ಲಿ?
ನೇರಳೆ ಮಾರ್ಗದ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ತಾಂತ್ರಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದಾಗಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.
ಬೆಳಿಗ್ಗೆ 7 ರಿಂದ 9 ಗಂಟೆಯ ಈ ನಿರ್ಬಂಧಿತ ಅವಧಿಯಲ್ಲೂ ಸಹ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಉಳಿದ ಟರ್ಮಿನಲ್ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ನೇರಳೆ ಮಾರ್ಗದಲ್ಲಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ರೈಲುಗಳು ಲಭ್ಯವಿರುತ್ತವೆ. ಇತ್ತ ಮೆಜೆಸ್ಟಿಕ್ (ಕೆಂಪೇಗೌಡ ನಿಲ್ದಾಣ) ನಿಂದ ವೈಟ್‌ಫೀಲ್ಡ್‌ (ಕಾಡುಗೋಡಿ) ವರೆಗೆ ಎಂದಿನಂತೆ ರೈಲುಗಳು ಓಡಾಡಲಿವೆ. ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಹಸಿರು ಮಾರ್ಗದ ರೈಲು ಸಂಚಾರದಲ್ಲಿ ಯಾವುದೇ ಅಡ್ಡಿ ಇರುವುದಿಲ್ಲ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗದ ಸಂಚಾರವೂ ಕೂಡ ಸಂಪೂರ್ಣ ಸಾಮಾನ್ಯವಾಗಿರಲಿದೆ ಎಂದು ಮೆಟ್ರೊ ನಿಗಮ ಸ್ಪಷ್ಟಪಡಿಸಿದೆ.

#FreedomTV #NammaMetro #PurpleLine #BengaluruMetro #MetroAlert #BMRCL #CommuterAlert #BengaluruNews #SundayMetroUpdates #MajesticMetro #GreenLine #YellowLine #ChallaghattaToWhitefield #NammaBengaluru #BreakingNews #KannadaNews

Comments (0)

Your email address will not be published. Required fields are marked *

Back to top button