ಜನಸಾಮಾನ್ಯರ ದನಿಜಿಲ್ಲೆ

ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದ ಎಫೆಕ್ಟ್ : ವಿದ್ಯಾರ್ಥಿಗಳ ಪರದಾಟ


ಮೈಸೂರು : ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದ ಎಫೆಕ್ಟ್..! ಹಿನ್ನೆಲೆ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್ ಮಾಡಲಾಗಿದೆ. ಬಸ್ ಇಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಹಿನ್ನಲೆ ಬಸ್ ತಡೆದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದರು. ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿದ್ದಾರೆ.


ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ವೀರಗೌಡನಪುರ ಬಳಿ ಕೆ.ಎಸ್.ಆರ್.ಟಿಸಿ ಬಸ್ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಮ್ಮ ಊರಿನಲ್ಲಿ ಯಾವ ಬಸ್ಗಳು ನಿಲ್ಲಿಸುತ್ತಿಲ್ಲ. ಶಾಲಾ ಕಾಲೇಜಿಗೆ ತೆರಳುವ ಮಕ್ಕಳಿಗೆ ನಿತ್ಯವು ಸಮಸ್ಯೆಯಾಗುತ್ತಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವವರೆಗೂ ರಸ್ತೆ ಬಿಟ್ಟು ಕದಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಈ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ನಲ್ಲೂ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಮೈಸೂರು – ಚಾಮರಾಜನಗರ ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Comments (0)

Your email address will not be published. Required fields are marked *

Back to top button