Freedom TV

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ವಯೋಸಹಜ ಅನಾರೋಗ್ಯದಿಂದ ನಿಧನ

ಬೀದರ್​: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭಿಮಣ್ಣ ಖಂಡ್ರೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಕೊನೆಯುಸಿರೆಳೆದಿದ್ದಾರೆ..

ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಅವರ ಮಗ, ಸಚಿವರೂ ಆಗಿರುವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್​ನಲ್ಲಿರುವ ಸ್ವಗೃಹದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ(ಬಿ) ಗ್ರಾಮದಲ್ಲಿ 1923ರ ಜನವರಿ 8ರಂದು ತಂದೆ ಶಿವಲಿಂಗಪ್ಪ, ತಾಯಿ ಪಾರ್ವತಿ ಬಾಯಿ ಅವರ ಮಗನಾಗಿ ಜನಿಸಿದರು. ಭೀಮಣ್ಣ ಖಂಡ್ರೆ ಅವರು ಲಕ್ಷ್ಮಿಬಾಯಿ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಮೂವರು ಪುತ್ರರು, ಐವರು ಪುತ್ರಿಯರಿದ್ದಾರೆ.

BA, LLB ಮುಗಿಸಿರುವ ಭೀಮಣ್ಣ ಖಂಡ್ರೆ ಅವರು ರಾಜಕೀಯ ಮಾತ್ರವಲ್ಲದೇ ನಿಜಾಮರ ವಿರುದ್ಧ ಹೋರಾಡಿ ಜೈಲಿಗೆ ಹೋಗಿ ಸ್ವಾತಂತ್ರ‍್ಯ ಹೋರಾಟಗಾರ ಎನಿಸಿಕೊಂಡಿದ್ದರು. ಕಲ್ಯಾಣ ಕರ್ನಾಟಕದಲ್ಲಿ ಲೋಕನಾಯಕ ಎಂದು ಖ್ಯಾತಿ ಪಡೆದಿರುವ ಇವರು ಸಹಕಾರ, ಶಿಕ್ಷಣ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button