ನಾಗಮಂಗಲ : ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಮತ್ತು ಸರ್ಕಾರದ ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ ಖಂಡಿಸಿ ಏಪ್ರಿಲ್ 27 ಭಾನುವಾರ ರಂದು ಬೆಳಿಗ್ಗೆ 10:30ಕ್ಕೆ ಬೆಳ್ಳೂರ್ ಕ್ರಾಸ್ನಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿ ವರಗೆ ಬೃಹತ್ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ.
ಈ ವಿಚಾರವಾಗಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ರವರಿಗೆ ಮನವಿ ಸಲ್ಲಿಸಿ ಒಕ್ಕಲಿಗ ಸಮಾಜಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಮೇಲೆ ಒತ್ತಾಯ ಮಾಡಲು ಶ್ರೀಮಠದ ಸನ್ನಿಧಿಗೆ ಪಾದಯಾತ್ರೆ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಒಕ್ಕಲಿಗ ಸಮುದಾಯದ ಮೀಸಲಾತಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಅಧ್ಯಕ್ಷರು ತಿಳಿಸಿದ್ದಾರೆ.
ರಾಜ್ಯ ಒಕ್ಕಲಿಗ ಸಮುದಾಯದ ಮೀಸಲಾತಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕೆ.ವಿ.ಮೂಡ್ಲಿಗಿರಯ್ಯ ಅವರು, ಒಕ್ಕಲಿಗರ ಮೀಸಲಾತಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪಕ್ಷಾತೀತವಾಗಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದು, ಇದಕ್ಕಾಗಿ ಆದಿಚುಂಚನಗಿರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ ಭಾಗವಹಿಸುವಂತೆ ಕರೆ ನೀಡುತ್ತಿದ್ದೇವೆ ಮತ್ತು ಜಾತಿ, ಜನಗಣತಿ ಕುರಿತು ಹಿಂದುಳಿದ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ವರದಿಗೆ ನಮ್ಮ ವಿರೋಧವಿದ್ದು, ಯಾವುದೇ ಕಾರಣಕ್ಕೂ ವರದಿ ಅಂಗೀಕಾರವಾಗದಂತೆ ನೋಡಿಕೊಳ್ಳಬೇಕು.
ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ನೇಮಕಾತಿಯಲ್ಲಿ ತಾರತಮ್ಯವಾಗಿದ್ದು, ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿಯಲ್ಲಿ ಒಬಿಸಿ ಮೀಸಲಾತಿಯಲ್ಲೂ ಒಕ್ಕಲಿಗರಿಗೆ ಅನ್ಯಾಯವಾಗುತ್ತಿದೆ ಎಂದು .ವಿ.ಮೂಡ್ಲಿಗಿರಯ್ಯ ಹೇಳಿದ್ದಾರೆ..