ಮುಡಾ ಹಗರಣ ಚುರುಕುಗೊಳಿಸಿದ ಇಡಿ ಮೈಸೂರು ಸೇರಿ ಹಲವೆಡೆ ದಾಳಿ!
ಮೈಸೂರು, ಅಕ್ಟೋಬರ್ 18:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1 ಆಗಿದ್ದಾರೆ. ಇದರ ಬೆನ್ನಲ್ಲೇ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮತ್ತೊಂದು ಕಡೆ ಪ್ರಕರಣದ A4 ಹಾಗೂ ಭೂ ಮಾಲೀಕ ಆಗಿರುವ ದೇವರಾಜ್ ಅವರ ಕೆಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಶೀಲನೆ ನಡೆಸುತ್ತಿದ್ದಾರೆ.
Post Views: 372