#Exclusive NewsTop Newsರಾಜಕೀಯಸುದ್ದಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಮರಿಗೌಡ ರಾಜೀನಾಮೆ ಸಾಧ್ಯತೆ!

ಮೈಸೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ  ಬೆನ್ನಲ್ಲಿಯೇ ಮುಡಾ ಅಧ್ಯಕ್ಷ ಮರಿಗೌಡ ಅವರನ್ನು ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶೀಘ್ರವೇ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಲಾಗುತ್ತದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ‌ ಮಾಡಲು ತಿರ್ಮಾನ ಮಾಡಲಾಗಿದೆ. ಇನ್ನು ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ‌ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ನಿರ್ದೇಶನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರು ಯಾವುದೇ ಕ್ಷಣದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ಇದಾದ ಮರು ಕ್ಷಣವೇ ಸರ್ಕಾರದಿಂದ ಆಡಳಿತಾಧಿಕಾರಿಯನ್ನು ನಿಯೋಜನೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗುತ್ತದೆ.

 

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ತನಿಖೆ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡಲಾಗುತ್ತಿದೆ. ಇನ್ನು ಮುಡಾ ಹಾಲಿ ಅಧ್ಯಕ್ಷ ಮರಿಗೌಡ ಅವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪಗಳು ಬರಲು ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಮುಡಾ ಅಧ್ಯಕ್ಷ ಮರಿಗೌಡ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೆಲವು ಗುರುತರ ಆರೋಪಗಳು ಕೂಡ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರ್ಧಾರ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button