Thursday, January 29, 2026
18 C
Bengaluru
Google search engine
LIVE
ಮನೆ#Exclusive Newsಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್​ಡ್ರೈವ್​ನಲ್ಲಿ ರಾಜಕೀಯ ನಾಯಕರು,ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋ ಪತ್ತೆ

ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್​ಡ್ರೈವ್​ನಲ್ಲಿ ರಾಜಕೀಯ ನಾಯಕರು,ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ಎಸ್ಐಟಿ  ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸ್‌ ಉನ್ನತ ಮೂಲಗಳು ಹೇಳಿವೆ.

 

 

ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ, ಸುಲಿಗೆ, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ತನಿಖೆಯ ಭಾಗವಾಗಿ ಸೆಪ್ಟೆಂಬರ್‌ 28ರಂದು ಅಧಿಕಾರಿಗಳು ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ 12 ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಿಢೀರ್‌ ದಾಳಿ ನಡೆಸಿದ್ದರು.

ಸರ್ಕಾರಿ ಅಧಿಕಾರಿಗಳ ವಿಡಿಯೋ

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಮನೆಯಲ್ಲಿಶೋಧ ಕಾರ್ಯಾಚರಣೆ ವೇಳೆ ಸಿಕ್ಕ ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ಗಳಲ್ಲಿ ಕೆಲ ರಾಜಕೀಯ ನಾಯಕರ ಹಾಗೂ ಸರಕಾರಿ ಅಧಿಕಾರಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮಹಿಳೆಯರ ಅಶ್ಲೀಲ ದೃಶ್ಯಗಳು ವಿಡಿಯೊದಲ್ಲಿವೆ. ಹನಿಟ್ರ್ಯಾಪ್‌ ಮೂಲಕ ಈ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿರುವ ಶಂಕೆಯಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಮುನಿರತ್ನರ ಮೊಬೈಲ್‌ನಲ್ಲಿ ಹನಿಟ್ರ್ಯಾಪ್‌ನ ಸಾಕಷ್ಟು ವಿಡಿಯೋ ಮತ್ತು ಆಡಿಯೋಗಳು ಇರುವ ಬಗ್ಗೆ ಸುಳಿವು ಸಿಕ್ಕಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments