ಬೆಳಗಾವಿ : ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಅವರ ತಮ್ಮ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನೂ ರಕ್ಷಣೆ ಮಾಡುತ್ತೇವೆ ಎಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.
ಸಿದ್ದು ಹೇಳಿಕೆಗೆ ಬಿಜೆಪಿ ನಾಯಕರ ಕಿಡಿ
ಸೋಮವಾರ (ಡಿಸೆಂಬರ್ 4) ರಂದು ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು.? ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ಮಾಡಿದರು.