Tuesday, April 29, 2025
29.1 C
Bengaluru
LIVE
ಮನೆUncategorizedಮೆದುಳು ಆರೋಗ್ಯ ಸೇವೆ ದೇಶಕ್ಕೆ ಮಾದರಿಯಾಗಲಿದೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಮೆದುಳು ಆರೋಗ್ಯ ಸೇವೆ ದೇಶಕ್ಕೆ ಮಾದರಿಯಾಗಲಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ಮುಂದೆ ಚಿಕಿತ್ಸೆ ದೊರೆಯಲಿದೆ ಎಂದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೊರ ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments