Freedom TV

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?

 

ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರನ್ನು ಕಣಕ್ಕಿಳಿಸಲು ಮುಂದಾಗಿದೆ. ಯದುವೀರ್ ರನ್ನ ಬಿಜೆಪಿ ಅಭ್ಯರ್ಥಿ ಮಾಡಿದರೆ ಮೈಸೂರು ಸುತ್ತಮುತ್ತಲಿನ ಕ್ಷೇತ್ರಗಳನ್ನ ಗೆಲ್ಲಲು ಅನುಕೂಲವಾಗಲಿದೆ ಎಂಬ ತಂತ್ರವನ್ನು ಅನುಸರಿಸಲು ಬಿಜೆಪಿ ಮುಂದಾಗಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಕ್ಕೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತದಲ್ಲಿದೆ. ಅದರಲ್ಲೂ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಪ್ರಯೋಗಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ರಾಜಕೀಯ ಎಂಟ್ರಿಗೆ ತೆರೆಮರೆಯಲ್ಲಿ ಕಸರತ್ತು ನಡೆದಿದೆ.

ಅಂತಿಮವಾಗಿ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಯದುವೀರ್ ಒಡೆಯರ್ ಅವರ ಹೆಸರು ಚರ್ಚೆ ಆಗುತ್ತಿದೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರುಗಳು ವಿರೋಧ ಇದೆ. ಹಾಗಾಗಿ ಹೊಸ ಪ್ರಯೋಗಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಜೊತೆಗೆ ಸಂಸತ್ ನಲ್ಲಿ ಸ್ಮೋಕ್ ಬಾಂಬ್‌ ವಿಚಾರದಲ್ಲಿ ಪ್ರತಾಪ್ ಸಿಂಹಗೆ ಸಂಕಷ್ಟ ಎದುರಾಗಿತ್ತು. ಈ ಎಲ್ಲಾ ವಿಷಯಗಳಿಂದ ಪ್ರತಾಪ್ ಸಿಂಹಗೆ ಟಿಕಖೇಟ್ ಕೈ ತಪ್ಪುವ ಸಂಭವ ಇದೆ.

ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟರೆ ಇಡೀ ಕ್ಷೇತ್ರದ ಕಾರ್ಯಕರ್ತರು ಬಾರೀ ವಿರೋಧ ವ್ಯಕ್ತಪಡಿಸುತ್ತಾರೆ. ಜೊತೆಗೆ ಬಿಜೆಪಿಯ ಮಾಜಿ ಸಚಿವ ರಾಮದಾಸ್, ಹಾಲಿ ಶಾಸಕ ನಾಗೇಂದ್ರರವರು ಪರೋಕ್ಷವಾಗಿ ಬಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಾಪ್ ಸಿಂಹಗೆ ಮತ್ತೆ ಟಿಕೆಟ್ ನೀಡಿದರೆ ಫ್ರಂಟ್ ಲೈನ್ ಕಾರ್ಯಕರ್ತರ ಜೊತೆಗೆ ಎಲ್ಲಾ ಬಿಜೆಪಿ ಕಾರ್ಯಕರ್ತರು ಬಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಾರೀ ಅಸಮಾಧಾನ ಭುಗಿಲೇಳಲಿದೆ.

ಯದುವೀರ್ ಒಡೆಯರ್ ಗೂ ರಾಜಕೀಯದಲ್ಲಿ ಸ್ವಲ್ಪ ಹೆಚ್ಚಿನ ಆಸಕ್ತಿ ಇದೆ. ಮೈಸೂರಿನಲ್ಲಿ ರಾಜವಂಶ್ಥರಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಗೆಲುವು ಸುಲಭ ಎಂಬ ಚರ್ಚೆಗಳು ನಡೆಯುತ್ತಿದೆ.

Comments (0)

Your email address will not be published. Required fields are marked *

Back to top button