Wednesday, April 30, 2025
24 C
Bengaluru
LIVE
ಮನೆ#Exclusive Newsಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ -ಸಿಎಂ ಸಿದ್ದರಾಮಯ್ಯ

ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ -ಸಿಎಂ ಸಿದ್ದರಾಮಯ್ಯ

ಈ ವರ್ಷದ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಅ.3ರಂದು ಬೆಳಿಗ್ಗೆ 9:15 ರಿಂದ 9:45 ರೊಳಗೆ ಉದ್ಘಾಟನೆ ಮಾಡಲಿದ್ದಾರೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ, ‘ಹಂಪನಾ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದಾರೆ. ಹಂಪ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ.

ನಾಡಗೀತೆಗೆ ಅವಮಾನ ಪ್ರತಿಭಟಿಸಿ ಹಂಪನಾ ರಾಜಿನಾಮೆ Hampana resigns in protest over  insult - Lokadarshan Daily Kannada News

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments