ಜಿಲ್ಲೆರಾಜ್ಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ

ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಲಾಗಿದೆ. ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ.

ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರು ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಮಾಡುವುದು ಹೀಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಮಕ್ಕಳಿಂದ ಪಿಟ್ ಕ್ಲೀನ್ ಮಾಡಿಸುವ ವಿಡಿಯೋಗಳು ಲಭ್ಯವಾಗಿದೆ. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದಾರೆ, ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ದ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.

Comments (0)

Your email address will not be published. Required fields are marked *

Back to top button