ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ ಮಾತನಾಡುವುದಕ್ಕೂ ಅಸಹ್ಯ ಅನ್ಸುತ್ತೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ..? ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ, ಆದರೆ ಅ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ. ವಿಜಯೇಂದ್ರ, ಯಡಿಯೂರಪ್ಪನವರಿಗೆ ಟೀಕೆ ಮಾಡಿದ್ರೆ ಮೋದಿ ಕೇಂದ್ರ ವರಿಷ್ಠರನ್ನು ಟೀಕೆ ಮಾಡಿದಂತೆ ಆಗುತ್ತೆ. ಯಡಿಯೂರಪ್ಪ ಆನೆ ಇದ್ದಂತೆ ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಇಂತಹ ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ವೇಸ್ಟ್ ಎಂದು ರೇಣುಕಾಚಾರ್ಯ ಹೇಳಿದರು.
ಸೋಮಣ್ಣ ಸೋಲಿಗೆ ವಿಜಯೆಂದ್ರ ಕಾರಣ ಎಂದು ಹೇಳುತ್ತಾರೆ. ಸೋಮಣ್ಣ ಸೋಲಲು ವಿಜಯೇಂದ್ರ ಕಾರಣನಾ..? ಶಿಕಾರಿಪುರದಲ್ಲಿ ಅವರನ್ನು ಸೋಲಿಸಲು ಕುತಂತ್ರ ಮಾಡಿದವರು ಇಂತವರೇ. ಗೆದ್ದರೆ ಮಹಾನ್ ನಾಯಕನಾಗುತ್ತಾನೆ ಎಂದು ಸೋಲಿಸಲು ಕುತಂತ್ರ ಮಾಡಿದರು. 2018 ರಲ್ಲಿ ಸಚಿವ ಸ್ಥಾನ ಕೊಡಲಿಲ್ಲ ಎಂದು ಈ ರೀತಿ ಮಾಡ್ತಾ ಇದ್ದಾರೆ ಎಂದರು. ಯಾವ ಸಿನಿಯಾರಿಟಿ ಇದೇ ಬೊಗಳೋದೇ ಸಿನಿಯಾರಿಟಿನಾ? ಎಂದು ಯತ್ನಾಳ್ ವಿರುದ್ದ ಎಂಪಿ ರೇಣುಕಾಚಾರ್ಯ ಕಿಡಿಕಾರಿದರು.