Top Newsಸುದ್ದಿ

ಯಾರಾದ್ರೂ ಲಂಚ ಕೇಳಿದ್ರೆ ನನಗೆ ಪತ್ರ ಬರೆಯಿರಿ- ಡಿಕೆಶಿ ಎಚ್ಚರಿಕೆಯ ಮಾತು

ಕನಕಪುರ: “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಒಂದು ವೇಳೆ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ” ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು” ಎಂದರು.

Comments (0)

Your email address will not be published. Required fields are marked *

Back to top button