Top Newsಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷವೈರಲ್ ನ್ಯೂಸ್ಸುದ್ದಿ

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ

ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ  ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳೊಂದಿಗೆ ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಯುಎಸ್-ಭಾರತದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಸುಧಾರಿಸುವ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಇಂಡೋ-ಪೆಸಿಫಿಕ್ ಗಡಿ ಭಾಗದ ಬಗ್ಗೆಯೂ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಅವರೊಂದಿಗೆ ಮೋದಿ ವಿಸ್ತ್ರತ ಚರ್ಚೆ ನಡೆಸಿದ್ದಾರೆ. ವ್ಯಾಪಾರ, ಭದ್ರತೆ, ಬಾಹ್ಯಾಕಾಶ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಇನ್ನಷ್ಟು ಗತಿ ಪಡೆಯಲು ಪರಿಶ್ರಮಿಸುತ್ತೇವೆ. ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಭಾರತ ಸದಾ ಗೌರವಿಸುತ್ತದೆ ಎಂದು ಇದೇ ವೇಳೆ ಮೋದಿ ಹೇಳಿದ್ದಾರೆ.

 

ಮಗದೊಂದು ಪೋಸ್ಟ್‌ನಲ್ಲಿ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವುದು ಕಂಡುಬಂದಿದೆ. ಮೂಲಸೌಕರ್ಯ, ಸೆಮಿಕಂಡಕ್ಟರ್, ರಕ್ಷಣಾ ವಲಯ, ಗ್ರೀನ್ ಎನರ್ಜಿ ಮತ್ತು ಇತರೆ ವಿಷಯಗಳಲ್ಲಿ ಉಭಯ ದೇಶಗಳ ಸಹಕಾರದ ಕುರಿತು ಚರ್ಚಿಸಲಾಯಿತು. ಭಾರತ-ಜಪಾನ್ ನಡುವಣ ಗಟ್ಟಿ ಬಾಂಧವ್ಯವು ಜಾಗತಿಕ ಏಳಿಗೆಗೆ ಪೂರಕವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕ್ವಾಡ್ ಶೃಂಗದಲ್ಲಿ ಭಾಗಿಯಾಗಲು ಶನಿವಾರವಷ್ಟೇ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡೆಲವೇರ್‌ನ ವಿಮ್ಮಿಂಗ್ಟನ್‌ನಲ್ಲಿರುವ ಬೈಡನ್ ಅವರ ನಿವಾಸದಲ್ಲಿ ಉಭಯ ನಾಯಕರು ಭಾರತ-ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚಿಸಿದ್ದರು.

 

Comments (0)

Your email address will not be published. Required fields are marked *

Back to top button