ಫ್ರೀಡಂ ಟಿವಿ ವಿಶೇಷವಿಶೇಷ

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!

ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.ಗದಗನಲ್ಲಿ ಭಾರಿ ಮಳೆಯಿಂದಾಗಿ ಮನೆಗಳಿಗೆಲ್ಲಾ ನೀರು ಸೇರಿ ಕೊಂಡಿವೆ.ಗದಗ ಜಿಲ್ಲೆ ಸೇರಿದಂತೆ ಹಲವು ಪಟ್ಟಣಗಳಲ್ಲಿ ಮಳೆಯಾಗಿದೆ.

ಇನ್ನು ಸೆ.23 ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

 

Comments (0)

Your email address will not be published. Required fields are marked *

Back to top button