ಬೆಳಗಾವಿ : ಚಳಿಗಾಲದ ಅಧಿವೇಶನಕ್ಕೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬೆಳಗಾವಿಯ ಸುವರ್ಣ ಗರ್ಡಾನ್ನಲ್ಲಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ವತಿಯಿಂದ ಇಂದು ಪ್ರತಿಭಟನೆ ನಡೆಸಿದರು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ರೈತರಿಗೆ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು. ಬರಗಾಲ ಹಿನ್ನೆಲೆ ಎಲ್ಲಾ ರೈತರಿಗೆ 25 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು. ಅಕ್ರಮ ಸಕ್ರಮ ಯೋಜನೆ ಜಾರಿ ಮಾಡಬೇಕು. ನಿರಂತರ ಖರೀದಿ ಕೇಂದ್ರ ತೆರೆಯಬೇಕು ಎಂದು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಒದಗಿಸಬೇಕು. ಹಡಗಲಿ ತಾಲೂಕಿನ ಕುಡುಗೋಲು ಮಟ್ಟ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸಬೇಕು. ಡೋಣಿ ನದಿ ಹಾಗೂ ಬೆಣ್ಣೆಹಳ್ಳ ಹೋಳೆತ್ತುವುದು ಸೇರಿದಂತೆ ಕುಡಿಯುವ ನೀರು , ಕಬ್ಬು, ತೋಟಗಾರಿಕೆ, ಬರ ಪರಿಹಾರ ನೀಡಬೇಕು. ಪಂಪ್ ಸೆಟ್ ಗಳಿಗೆ 9 ಘಂಟೆಗಳ ಕಾಲ ನಿರಂತರ ವಿದ್ಯುತ್ ಒದಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹೀಗೆ ಸರ್ಕಾರದ ಮುಂದೆ ಹಲವಾರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರೊಟೆಸ್ಟ್ ಮಾಡಲಾಗಿದೆ.


