KOPPALA

ಲಾರಿ ಟ್ರ್ಯಾಕ್ಟರ್ ಡಿಕ್ಕಿ; ಒಂದೇ ಕುಟುಂಬದ 6 ಮಂದಿ ದುರ್ಮರಣ!

Serious accident in Highway 50 koppala district 6 people death

ಕೊಪ್ಪಳ: ಟ್ರ್ಯಾಕ್ಟರ್ ಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದು 6 ಜನರು ಮರಣ ಹೊಂದಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡ ಹೃದಯವಿದ್ರಾವಕ ಘಟನೆ ಕೊಪ್ಪಳ-ವಿಜಯನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರಾದವರು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು ಕೆಂಚಪ್ಪ (35), ಮಹಾಂತೇಶ್ (18) ಭರತ್ (01), ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಸ್ಥಳದಲ್ಲೇ ಅಸು ನೀಗಿದ್ದಾರೆ.

ಗುದ್ದಿದ ರಭಸಕ್ಕೆ ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್


ದುರ್ದೈವಿಗಳು ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರಾಗಿದ್ದು ಕೊಪ್ಪಳದ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಜರುಗಿದೆ. ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ನಿಯಂತ್ರಣ ತಪ್ಪಿದ ಎರಡೂ ವಾಹನಗಳು ಸೇತುವೆಯಿಂದ ಕೆಳಕ್ಕೆ ಉರುಳಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಹಲವರು ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.
ಘಟನಾ ಸ್ಥಳ ಹಾಗೂ ಹೊಸಪೇಟೆ ಆಸ್ಪತ್ರೆ ಶವಾಗಾರಕ್ಕೆ ಕೂಡಲೆ ಧಾವಿಸಿದ ವಿಜಯನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್​ಪಿ ಕೆ.ಪಿ.ಮುರುಳಿಧರ್ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಮೃತ ಕುಟುಂಬದವ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಹಾಗೂ ಜನರು ಪರಸ್ಪರ ಸ್ವಇ್ಛಾ ಮನೋಭಾವದಿಂದ ಸ್ಥಳದಲ್ಲಿ ಕ್ರಿಪ್ರ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು.ಇಲ್ಲವಾದಲ್ಲಿ ಮೃತರ ಸಂಖ್ಯೆ ಏರುವ ಸಾಧ್ಯತೆಯಿತ್ತು.

ಸುದ್ದಿ ತಿಳಿದ ತಕ್ಷಣ ಸಿಎಂ ರವರೊಂದಿಗೆ ಮಾತನಾಡಿದ ಸಂಸದ ತುಕಾರಾಂ 6 ಜನ ದುರ್ಮರಣ ಹೊಂದಿದ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರವನ್ನು ಪ್ರತಿ ಗಾಯಾಳುವಿಗೆ ತಲಾ ಒಂದು ಲಕ್ಷ ಪರಿಹಾರವನ್ನು ಒದಗಿಸಿದರು.
#KoppalAccident #VijayanagaraNews #RoadAccidentKarnataka #HuligammaTemple #TragedyOnHighway #KoppalNews #Sandur #Kudligi #HorrificAccident #FreedomTVNews #BreakingNewsKannada

Comments (0)

Your email address will not be published. Required fields are marked *

Back to top button