ರಾಜ್ಯದಲ್ಲಿ ತಲೆದೋರಿರುವ ವಕ್ಫ್ ಭೂ ವಿವಾದ ಸಂಬಂಧ ಸ್ವಪಕ್ಷೀಯರಿಂದಲೇ ಅಸಮಾಧಾನಕ್ಕೆ ಗುರಿಯಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಇದೀಗ ಕಾಂಗ್ರೆಸ್‌ನ ಕೆಲ ಶಾಸಕರು ಹೈಕಮಾಂಡ್‌ಗೂ ಪತ್ರದ ಮೂಲಕ ದೂರು ನೀಡಿದ್ದಾರೆ ಎನ್ನಲಾ ಗಿದೆ.
ಈ ದೂರಿನಲ್ಲಿ ಆಗಾಗ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರಕ್ಕೆ ಒಳಪಡಿಸುವಂತಹ ನಡವಳಿಕೆ ತೋರುತ್ತಿರುವ ಜಮೀರ್‌ಗೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ವಕ್ಸ್ ಆಸ್ತಿ ನೋಟಿಸ್ ವಿಷಯ ರಾಜ್ಯದಲ್ಲಿ ರಾಜಕೀಯವಾಗಿ ಭಾರೀ ಸದ್ದು ಮಾಡಲು, ವಿವಿಧ ಜಿಲ್ಲೆಗಳಲ್ಲಿ ರೈತರಿಂದ ಆಕ್ರೋಶ ವ್ಯಕ್ತ ವಾಗಲುಮತ್ತು ಪ್ರತಿಭಟನೆಗೆ ಕಾರಣವಾಗಲು ಜಮೀರ್ ಕೈಗೊಂಡ ವಕ್ಸ್ ಅದಾಲತ್ ಕಾರಣ.