_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದವರು ಕಾಂಗ್ರೆಸ್ ನವರು. ಜಗಜೀವನ ರಾಮ್ ರಿಗೆ ಕಾಂಗ್ರೆಸ್ ನಿಂದ ಅನ್ಯಾಯ, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ಆಗಿ ನೋಡಿದೆ. ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿತಾರೆ. ಮನಸ್ಸಿನಲ್ಲಿ ಸಂವಿಧಾನ, ಮೀಸಲಾತಿ ವಿರೋಧಿ ನಿಲುವು ಇಟ್ಟುಕೊಂಡಿದ್ದಾರೆ. ವಿದೇಶದಲ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ನಾಯಕರು ಎಂದೆಂದಿಗೂ ಮೀಸಲಾತಿ ವಿರೋಧಿಗಳು. ರಾಹುಲ್ ಗಾಂಧಿ ಸಿಖ್ ರ ಪೇಟಾದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಸಿಖ್ ರನ್ನು ಅತ್ಯಂತ ಗೌರವದಿಂದ ಕಾಣುತ್ತಿದೆ. ವಿದೇಶ ದಲ್ಲಿ ಹೋಗಿ ಈ ರೀತಿ ಮಾತನಾಡೋದು ಸರಿಯಲ್ಲ. ಚುನಾವಣೆ ಬಗ್ಗೆಯೂ ರಾಹುಲ್ ಮಾತನಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣೆ ಆಯೋಗದ ಬಗ್ಗೆ ಏನು ಅನಿಸಲೇ ಇಲ್ಲ. ಇಷ್ಟು ಪಾರದರ್ಶಕವಾಗಿ ಎಲ್ಲಿಯೂ ಚುನಾವಣೆ ನಡೆಯಲ್ಲ. ರಾಜಕೀಯ ಟೀಕೆ ಮಾಡೋ ಭರದಲ್ಲಿ ಈ ರೀತಿಯ ಮಾತು ಸರಿಯಲ್ಲ. ಇಡೀ ದೇಶವನ್ನು ಅಪಮಾನ ಮಾಡ್ತಿದ್ದಾರೆ. ದೇಶದ ಪ್ರತಿಷ್ಠೆಗೆ ಮಸಿ ಬಳಿಯುತ್ತಿದ್ದಾರೆ. ಅವರು ಏನೇ ಹೇಳಲಿ, ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧ, ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ಖಂಡಿಸುತ್ತೇನೆ ಎಂದು ಹೇಳಿದರು.
ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
RELATED ARTICLES