ಜಿಲ್ಲೆ

ವಿರೋಧ ಪಕ್ಷದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಿದ್ದು, ಅನುಮತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.

Comments (0)

Your email address will not be published. Required fields are marked *

Back to top button