Tuesday, June 24, 2025
26.6 C
Bengaluru
Google search engine
LIVE
ಮನೆರಾಜಕೀಯಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ

ಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿದೆ.

ಪ್ರಕರಣ ಸಂಬಂಧ ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ:

ಸಮಿತಿಯಲ್ಲಿ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಇರಲಿದ್ದು. ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶಗಳನ್ನು ಪರಿಶೀಲಿಸಿ ಈ ಸಮಿತಿಯು ರಾಜ್ಯಾಧ್ಯಕ್ಷರಿಗೆ ವರದಿ ನೀಡಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments