ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ಹಿನ್ನೆಲೆ ಶ್ರೀ ಅಯ್ಯಪ್ಪ ಮಾಲಾಧಾರಿಗಳಿಂದ ಟ್ರೈನ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಅಯ್ಯಪ್ಪ ಮಾಲಾಧಾರಿಗಳು ಪೂಜೆ ಸಲ್ಲಿಸಿದರು. ಕಬ್ಬು ಬಾಳೆ ಹಾಗೂ ಹೂನಿಂದ ರೈಲಿಗೆ ಅಲಂಕಾರ ಮಾಡಲಾಗಿತ್ತು. ಡಿಸೆಂಬರ್ 2ರಂದು ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ಹೋಗಲಿದೆ. ಶ್ರೀ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆಯೊಂದಿಗೆ ಪೂಜೆ ಸಲ್ಲಿಸಲಾಯಿತು. ಟ್ರೈನ್ಗೆ ವಿಶೇಷ ಪೂಜೆ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಶ್ರೀ ಅಯ್ಯಪ್ಪ ಮಾಲಾಧಾರಿಗಳು ಧನ್ಯವಾದ ತಿಳಿಸಿದರು.


