ಶಿವಮೊಗ್ಗ: ಮೂರು ಎಕರೆ ಒಳಗಿನ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. 2015ಕ್ಕೂ ಪೂರ್ವದಲ್ಲಿ ಬಗರ್‌ಹುಕುಂ, ಅರಣ್ಯಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಪ್ರಕರಣಗಳ ಬಗ್ಗೆ ಇನ್ನೂ ಕೋರ್ಟ್ ತೀರ್ಪು ಬಂದಿಲ್ಲ. ಹೀಗಾಗಿ ಈಗ ಅವರನ್ನು ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ. ಇದನ್ನು ನಮ್ಮ ಅಧಿಕಾರಿಗಳಿಗೂ ತಿಳಿಸಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ನ್ಯಾಯಾಲಯದ ಅಂತಿಮ ಆದೇಶ ಬಂದ ಕೆಲವು ಪ್ರಕರಣಗಳಲ್ಲಿ ಮಾತ್ರ ಒತ್ತುವರಿ ತೆರವು ಮಾಡಲಾಗುತ್ತಿದೆ. 2015ರ ಬಳಿಕವೂ ವ್ಯಾಪಕ ಒತ್ತುವರಿಯಾಗುತ್ತಿದೆ. ಇದನ್ನು ಉಪಗ್ರಹ ಆಧಾರಿತ ಚಿತ್ರಗಳೇ ವಿವರಿಸುತ್ತಿವೆ. ಇಂತಹ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ಹೇಳಿದರು.