#Exclusive NewsTop Newsಫ್ರೀಡಂ ಟಿವಿ ವಿಶೇಷಸುದ್ದಿ

ಸತೀಶ್ ಜಾರಕಿಹೊಳಿ-ಬಿವೈ ವಿಜಯೇಂದ್ರ ದಿಢೀರ್ ಭೇಟಿ!

ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ‌ಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ವಿಜಯೇಂದ್ರ-ಜಾರಕಿಹೊಳಿ‌ ಭೇಟಿ ಆಗಿದ್ದಾರೆ.

ಇಬ್ಬರು ನಾಯಕರ ಭೇಟಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ, ಸಿಎಂ ಬದಲಾವಣೆಯ ಕೂಗು ಕೇಳಿಬಂದಿತ್ತು. ಅಲ್ಲಿವರೆಗೆ ಸೈಲೆಂಟ್ ಆಗಿದ್ದ ಸತೀಶ್ ಜಾರಕಿಹೊಳಿ ದಿಢೀರ್ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಇತ್ತ ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮೊನ್ನೆಯಷ್ಟೇ ತುಮಕೂರಲ್ಲಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು.

Comments (0)

Your email address will not be published. Required fields are marked *

Back to top button