ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಸಿನ ಕೂಸು ಗ್ರೇಟರ್ ಬೆಂಗಳೂರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ಮಾಡುವುದಕ್ಕೆ ಭೂಸ್ವಾಧೀನ ಮಾಡಿಕೊಳ್ಳುವುದು ತಪ್ಪು.ಇದಕ್ಕೆ ನಮ್ಮ ವಿರೋಧವಿದೆ ಎಂದು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಬಾರದು ಪತ್ರದ ಮೂಲಕ ದಳಪತಿ ದೇವೇಗೌಡರು ಒತ್ತಾಯ ಮಾಡಿದ್ದಾರೆ. ಈ ಪತ್ರದ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ದೇವೇಗೌಡರು ಪರೋಕ್ಷವಾಗಿ ಟಕ್ಕರ್ ಕೊಟ್ಟಿದ್ದಾರೆ. ಮಾಜಿ ಪ್ರಧಾನಿಗಳ ಈ ಪತ್ರದಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಿನ್ನಡೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.