#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯಸುದ್ದಿ

ಹರ್ಯಾಣ: ಅ.12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

ಹರ್ಯಾಣ :ವಿಧಾನಸಭಾ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್​ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದು, ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ  ಹರ್ಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕರೊಂದಿಗೆ ಸಭೆ ನಡೆಸಲು ಹರ್ಯಾಣಕ್ಕೆ ವೀಕ್ಷಕರನ್ನು ಕಳುಹಿಸುತ್ತದೆ, ಇದರಿಂದಾಗಿ ಪಕ್ಷವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಸರಿಯಾದ ಅಭ್ಯರ್ಥಿಯನ್ನು ಅಧಿಕೃತವಾಗಿ ಆಯ್ಕೆ ಮಾಡುತ್ತದೆ. ಅದರೊಂದಿಗೆ ಸಂಪುಟ ಸಚಿವರ ಪಟ್ಟಿಯನ್ನು ತಯಾರಿಸಲಾಗುವುದು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆದರೆ, ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಜನರು ಮತ ಚಲಾಯಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ 61.38 ಶೇಕಡಾ ಮತದಾನವಾಗಿದೆ, ನಂತರ ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 57.31 ಶೇಕಡಾ ಮತ್ತು ಅಕ್ಟೋಬರ್ 1ರಂದು ಅಂತಿಮ ಹಂತದಲ್ಲಿ 65.48ರಷ್ಟು ಮತದಾನವಾಗಿದೆ.

 

Comments (0)

Your email address will not be published. Required fields are marked *

Back to top button