#Exclusive NewsTop Newsಸುದ್ದಿ

ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ !

ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

9 ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದು, ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಬೆಳಗ್ಗೆ 11:50ರ ನಂತರ ದೇವಿಯ ವಿಶ್ವರೂಪ ದರ್ಶನ ಬಳಿಕ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ​​ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಸ್ವರೂಪ್‌, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್​​ಪಿ ಮೊಹಮ್ಮದ್​ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್​ ಮಾಡಲಾಗುತ್ತದೆ.

Comments (0)

Your email address will not be published. Required fields are marked *

Back to top button