ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು.

ಇದೇ ವೇಳೆ ರಾಜ್ಯ ಸರಕಾರದ ವೈಫಲ್ಯಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಮಾನ್ಯ ಆರ್. ಅಶೋಕ್ ಅವರು ಪಾಲ್ಗೊಂಡಿದ್ದರು.