Freedom tv desk :

IPL 2024 : ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್ ತಂಡದ ಹೊಸ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮ ಬದಲಿಗೆ ಹಾರ್ದಿಕ್ ಪಾಂಡ್ಯ ಮನ್ನಡೆಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿರುವುದು ಗೊತ್ತೇಇದೆ. ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯರನ್ನು ಐಪಿಎಲ್ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಟ್ರೇಡ್ ಮಾಡಿಕೊಂಡಿದ್ದಾರೆ.

ಈ ಟ್ರೇಡ್​ಗಾಗಿ ಮುಂಬೈ ಇಂಡಿಯಾನ್ಸ್ ಬರೊಬ್ಬರಿ 100 ಕೋಟಿ ರೂ. ನೀಡಿದೆ. ಅಂದರೆ ಹಾರ್ದಿಕ್ ಪಾಂಡ್ಯರನ್ನ ಮಾರಾಟ ಮಾಡಲು ಗುಜರಾತ್ ಟೈಟಾನ್ಸ್ ಬೃಹತ್ ಮೊತ್ತದ ಡಿಮ್ಯಾಂಡ್​ ಇಟ್ಟಿದ್ದರು.

ಐಪಿಎಲ್ ಟ್ರೇಡಿಂಗ್ ನಿಯಮಗಳ ಪ್ರಕಾರ , ಒಬ್ಬ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳುಬೇಕಿದ್ದರೆ ಎರಡೂ ಫ್ರಾಂಚೈಸಿಗಳು ಒಮ್ಮತಕ್ಕೆ ಬರಬೇಕು. ಅಲ್ಲದೇ ಆಟಗಾರರು ಮಾರಾಟ ಮಾಡುವ ಫ್ರಾಂಚೈಸಿಯು ಹೇಳುವ ಮೊತ್ತವನ್ನು ಖರೀದಿಸುವ ಫ್ರಾಂಚೈಸಿ ನೀಡಬೇಕಾಗುತ್ತದೆ. ಹೀಗೆ ಎರಡು ಫ್ರಾಂಚೈಸಿಗಳ ನಡುವೆ ಡೀಲ್ ಕುದುರಿದರೆ ಮಾತ್ರ ಟ್ರೇಡಿಂಗ್ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಹಾರ್ದಿಕ್ ಪಾಂಡ್ಯರ ಖರೀದಿಗೆ ಮುಂದಾಗಿದ್ದ ಮುಂಬೈ ಇಂಡಿಯನ್ಸ್​ಗೆ ಗುಜರಾತ್ ಟೈಟಾನ್ಸ್ ಬೃಹತ್ ಮೊತ್ತದ ಬೇಡಿಕೆಯಿಟ್ಟರು. ಅಂತಿಮವಾಗಿ 100 ಕೋಟಿ ರೂ.ಗಳ ಡೀಲ್​ನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಪಾಂಡ್ಯರನ್ನು ಖರೀದಿಸಿದೆ ಎಂದು ವರದಿಯಾಗಿದೆ.

ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ : ಹಾರ್ದಿಕ್ ಪಾಂಡ್ಯ, ಡೆವಾಲ್ಡ್ ಬ್ರೆವಿಸ್,ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್.ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡುಲ್ಕರ್, ಶಮ್ಸ್ ಮುಲಾನಿ, ನೆಹಾರ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತೀಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್, ದಿಕ್ಯನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಕ್ಷಾರ, ನಮನ್ ಧೀರ್, ಅನ್ಯುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

By admin

Leave a Reply

Your email address will not be published. Required fields are marked *

Verified by MonsterInsights