ಕ್ರೈಂ ಸ್ಟೋರಿರಾಜ್ಯಸುದ್ದಿ

ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ; ನಾಲ್ವರು ಬಂಧನ..!

ಬೀದರ್ : ಬೀದರ್ ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಾಚರಣೆ ಫಲವಾಗಿ, ಕಾಳಸಂತೆಯಲ್ಲಿ ಮಾರಾಟ ಮಾಡಲು ಹೊಲದಲ್ಲಿ ಸಂಗ್ರಹಿಸಿದ್ದ 105 ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಿಲಿಂಡರ್‌ಗಳ ಮೌಲ್ಯ 2.55 ಲಕ್ಷ ರೂ. ಅಧಿಕವಾಗಿದೆ.

ಜಪ್ತಿಗೊಂಡ ಸಿಲಿಂಡರ್‌ಗಳಲ್ಲಿ ಗೃಹಬಳಕೆ ಮತ್ತು ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳು ಸೇರಿದ್ದು, ಇಂಡಿಯನ್ ಮತ್ತು ಹೆಚ್‌ಪಿ ಗ್ಯಾಸ್ ಸಿಲಿಂಡರ್ ಏಜೆನ್ಸಿಗಳಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿತ್ತು. ಗ್ಯಾಸ್ ಸಿಲಿಂಡರ್ ಕೊರತೆ ಕಾರಣದಿಂದ, ಹೋಲಿನಲ್ಲಿಯೇ ಸಾಮಾನ್ಯ ಮನೆ ಬಳಕೆಯ ಎಲ್‌ಪಿಜಿ ಗ್ಯಾಸ್ 1,000 ರೂ.ಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ.

ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button