Thursday, November 20, 2025
21.7 C
Bengaluru
Google search engine
LIVE
ಮನೆ#Exclusive Newsಡಿ.ಕೆ ಸುರೇಶ್‌ ಹೆಸರಲ್ಲಿ 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ...!

ಡಿ.ಕೆ ಸುರೇಶ್‌ ಹೆಸರಲ್ಲಿ 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ…!

ಬೆಂಗಳೂರು : ಕಾಂಗ್ರೆಸ್‌ ಮಾಜಿ ಸಂಸದ ಡಿ.ಕೆ ಸುರೇಶ್‌ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ಆರ್‌ಆರ್‌ ನಗರ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಐಶ್ವರ್ಯ ಗೌಡ , ನಟ ಧರ್ಮೇಂದ್ರ  ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಐಶ್ವರ್ಯ ಗೌಡ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಿಂದ 11 ಬಾರಿ ಚಿನ್ನ ಖರೀದಿಸಿ ವಂಚಿಸಿದ್ದಾರೆ. ಈ ಸಂಬಂಧ ಚಿನ್ನದಂಗಡಿ ಮಾಲೀಕರಾದ ವನಿತಾ ಐತಾಳ್‌ ಅವರು ದೂರು ನೀಡಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದರು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದರು. ಧರ್ಮೇಂದ್ರ ಡಿ.ಕೆ ಸುರೇಶ್‌ ವಾಯ್ಸ್‌ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್‌ಗೆ ಕರೆ ಮಾಡಿ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ವನಿತಾ ಆರ್‌ಆರ್‌ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ವನಿತಾ ಐತಾಳ್‌ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments