Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಘಟನೆ ನಡೆದಿದ್ದು, 17ರ ಅಪ್ರಾಪ್ತೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನ.20 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ. ಪುತ್ರಿಯ ಸಾವಿಗೆ ಸಂಬಂಧಿ ಪ್ರವೀಣ್ ಚಾರ್ಮಾಡಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹುಡುಗಿಗೆ ಸಂಬಂಧಿ ಪ್ರವೀಣ್ ಚಾರ್ಮಾಡಿ ಲವ್ ಆಗಿತ್ತು. ಮದುವೆ ಆಗುವುದಾಗಿ ಆಕೆ ಜೊತೆ ಲೈಂಗಿಕ ಸಂಪರ್ಕ ಕೂಡ ನಡೆಸಿದ್ದಾನೆ. ಬಳಿಕ ಮದುವೆ ಆಗುವುದಿಲ್ಲ ಎಂದು ದೋಖಾ ಮಾಡಿದ್ದಾನೆ. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ದೂರಿದ್ದಾರೆ.

ಪ್ರವೀಣ್ ವಿರುದ್ಧ ಹೃಷ್ವಿ ಪೋಷಕರಿಂದ ದೂರು ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹೃಷ್ವಿ ಆತ್ಮಹತ್ಯೆ ಬಳಿಕ ಆರೋಪಿ ಪ್ರವೀಣ್​ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೆಳ್ತಂಗಡಿ ಮಿತ್ತಬಾಗಿಲಿನ ಕೋಡಿ ನಿವಾಸಿಯಾಗಿರುವ ಹೃಷ್ಟಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲ ದಿನಗಳ ಹಿಂದೆ ಆಕೆ ಅಚಾನಕ್‌ ಆಗಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Comments (0)

Your email address will not be published. Required fields are marked *

Back to top button