ಹುಬ್ಬಳ್ಳಿ; 18 ವರ್ಷದ ಯುವತಿ ಹಾಗೂ 50 ವರ್ಷದ ಅಕಂಲ್ ಲವ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗ್ತಿದೆ ಎಂದು ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಫೆಬ್ರವರಿ 18 ರಂದು ನೊಂದ ಮಹಿಳೆಯೊಬ್ಬರು ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಗೆ ಹಾಜರಾಗಿ 2023 ರಲ್ಲಿ ತಾನು ಅಪ್ರಪ್ತೆಯಾದಾಗ ಚಾಲುಕ್ಯ ನಗರದ ನಿವಾಸಿ ಪ್ರಕಾಶ ಕಂಜರಘಾಟ (49) ಎಂಬ ವ್ಯಕ್ತಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡುವ ಜೀವ ಬೆದರಿಕೆ ಹಾಕಿ ತನ್ನ ಮನೆಗೆ ಕರೆಸಿಕೊಂಡು ಒತ್ತಾಯದ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ. ಈ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದರು.
ಈಗಾಗಲೇ ದೂರಿನ ಅನ್ವಯ ಆರೋಪಿಯನ್ನು ಬಂಧನ ಮಾಡಲಾಗಿದೆ. ಈ ವ್ಯಕ್ತಿ ಇನ್ನೂ ಹಲವಾರು ಜನರಿಗೆ ಮೋಸ ಮಾಡಿದ್ದಾನೆಂಬ ಆರೋಪಗಳಿವೆ. ಈ ಬಗ್ಗೆ ತನಿಖೆ ಮಾಡಲಾಗುವುದು. ಅಲ್ಲದೇ ಯಾರೇ ಇತನಿಂದ ಮೋಸ ಹೋಗಿದಲ್ಲಿ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಿಸಬೇಕೆಂದು ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.


