ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್‌ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ ಭಾರತ ತಂಡ ಕಲೆಹಾಕಿದ ಅತೀ ಕಡಿಮೆ ಮೊತ್ತ ಎಂಬುದು ವಿಶೇಷ. ಅದರಲ್ಲೂ ಇದೇ ಮೊದಲ ಬಾರಿಗೆ ಭಾರತ ತಂಡ ತವರಿನಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಇದಕ್ಕೂ ಮುನ್ನ 1987 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಕೇವಲ 75 ರನ್‌ಗಳಿಗೆ ಆಲೌಟ್ ಆಗಿತ್ತು. ಇದೀಗ 37 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಂಡಾಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕಿವೀಸ್ ವೇಗಿಗಳ ಅಬ್ಬರಕ್ಕೆ ಮಕಾಡೆ ಮಲಗಿತು. ನಿಧಾನಗತಿ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದೊಂದು ಕದಿಯಲು ತಿಣುಕಾಡಿತು. ರೋಹಿತ್, ಕೊಹ್ಲಿ, ರಾಹುಲ್ ಸೇರಿದಂತೆ ಅಗ್ರಕ್ರಮಾಂಕದ ಬ್ಯಾಟರ್‌ಗಳು ಬಹುಬೇಗನೆ ಪೆವಿಲಿಯನ್ ಪರೇಡ್ ನಡೆಸಿದರು. ಅಂತಿಮವಾಗಿ ಭಾರತ 46 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 3ನೇ ಅತೀ ಕಡಿಮೆ ರನ್ ಗಳಿಸಿದ ಕೆಟ್ಟ ದಾಖಲೆಯನ್ನು ಹೆಗಲಿಗೇರಿಸಿಕೊಂಡಿತು.
ALL OUT FOR 46
It’s the lowest total India have been dismissed for at home https://t.co/tzXZHnJPJI | #INDvNZ pic.twitter.com/x7z1SPzW5N
— ESPNcricinfo (@ESPNcricinfo) October 17, 2024
ನೆಲ ಕಚ್ಚಿದ ಬ್ಯಾಟರ್ಸ್
ಟೀಂ ಇಂಡಿಯಾ ಪರ ರಿಷಭ್ ಪಂತ್ 20 ರನ್, ಯಶಸ್ವಿ ಜೈಸ್ವಾಲ್ 13 ರನ್ ಗಳಿದರು. ಉಳಿದ ಆಟಗಾರರು ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ರೋಹಿತ್ ಶರ್ಮಾ 2ರನ್, ಕುಲೀಪ್ ಯಾದವ್ 2ರನ್, ಜಸ್ಪ್ರೀತ್ ಬುಮ್ರಾ 1 ರನ್, ಸಿರಾಜ್ 4 ರನ್ ಗಳಿಸಿದರು. ಇನ್ನುಳಿದಂತೆ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಶೂನ್ಯ ಸುತ್ತಿದರು.

ರೂರ್ಕ್, ಹೆನ್ರಿ ಕಮಾಲ್:
ಆರಂಭದಿಂದಲೂ ಅಧಿಕ ರನ್ ಬಿಟ್ಟುಕೊಟಡ ವಿಲಿಯಂ ಓ’ರೂರ್ಕ್, ಮ್ಯಾಟ್ ಹೆನ್ರಿ ಭಾರತದ ಆಟಗಾರರನ್ನು ಬಿಗಿ ಹಿಡಿತದಲ್ಲಿ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಮಾರಕ ದಾಳಿ ನಡೆಸಿದ ವೇಗಿ ಮ್ಯಾಕ್ ಹೆನ್ರಿ 13.2 ಓ ವರ್‌ಗಳಲ್ಲಿ 15 ರನ್ ಬಿಟ್ಟುಕೊಟ್ಟು 5 ವಿಕೆಟ್ ಕಿತ್ತರೆ, ವಿಲಿಯಂ ಓ’ರೂರ್ಕ್ 12 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 4 ವಿಕೆಟ್ ಹಾಗೂ ಟಿಮ್ ಸೌಥಿ ಒಂದು ವಿಕೆಟ್ ಪಡೆದರು.

ಟೀಂ ಇಂಡಿಯಾ ಕಳಪೆ ರನ್ ಗಳಿಸಿದ ಪಂದ್ಯಗಳು
* 36 ರನ್ – ಆಸ್ಟ್ರೇಲಿಯಾ ವಿರುದ್ಧ – ಡಿಲೇಡ್ ಮೈದಾನ (2020)
* 42 ರನ್ – ಇಂಗ್ಲೆಂಡ್ ವಿರುದ್ಧ – ಲಾರ್ಡ್ಸ್ ಮೈದಾನ (1974
* 46 ರನ್ – ನ್ಯೂಜಿಲೆಂಡ್ ವಿರುದ್ಧ – ಚಿನ್ನಸ್ವಾಮಿ ಕ್ರೀಡಾಂಗಣ (2024)
* 58 ರನ್ – ಆಸ್ಟ್ರೇಲಿಯಾ ವಿರುದ್ಧ – ಮ್ಯಾಂಚೆಸ್ಟರ್(1952)
* 66 ರನ್ – ದಕ್ಷಿಣ ಆಫ್ರಿಕಾ ವಿರುದ್ಧ – ಡರ್ಬನ್ ಮೈದಾನ (1996)


