Top Newsರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆಯೇ ಆಸ್ಟ್ರೇಲಿಯಾಗೆ ಹಾರಿದ 20 ಶಾಸಕರು

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರು ವಿದೇಶ ಪ್ರವಾಸಕ್ಕೆ ತೆರಳುತ್ತಿರುವುದು ಈಗ ಎಲ್ಲರ ಗಮನ ಸೆಳೆದಿದೆ. ಸುಮಾರು 20 ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಒಟ್ಟಾಗಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಟಿದ್ದಾರೆ.

ಈ ಪ್ರವಾಸವು ‘ಅಧ್ಯಯನ ಪ್ರವಾಸ’ ಎಂಬ ಹೆಸರಿನಲ್ಲಿ ನಡೆಯುತ್ತಿದ್ದು, ಇಂದಿನಿಂದ ಮಾರ್ಚ್ 1ರವರೆಗೆ ನಿಗದಿಯಾಗಿದೆ. ಒಂದು ಕಡೆ ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದರೆ, ಇನ್ನೊಂದೆಡೆ ಶಾಸಕರು ಸಾಮೂಹಿಕವಾಗಿ ವಿದೇಶಕ್ಕೆ ಹಾರುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ವಿಶೇಷವೆಂದರೆ, ರಾಜಕೀಯ ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬಹುದು ಎಂಬ ಭೀತಿಯಿಂದ ಕೆಲವು ಶಾಸಕರು ಈ ಪ್ರವಾಸದಿಂದ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ, ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿರುವಾಗಲೇ ಶಾಸಕರ ಈ ಆಸ್ಟ್ರೇಲಿಯಾ ಭೇಟಿ ಭಾರೀ ಕುತೂಹಲ ಮೂಡಿಸಿದೆ.

Comments (0)

Your email address will not be published. Required fields are marked *

Back to top button