ಬೆಂಗಳೂರು: ಕಳೆದ ವರ್ಷ ಜಾರಿಯಾದ ‘ಶಕ್ತಿ’ ಯೋಜನೆ ಯಶಸ್ವಿಗೊಂಡಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ 200 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. 2023ರ ಜೂ.11ರಿಂದ ಆರಂಭವಾಗಿರುವ ಈ ಯೋಜನೆಯ ಲಾಭವನ್ನು 200 ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದಾರೆ.
ಮೇ 1ರ ಅಂತ್ಯಕ್ಕೆ 200.43 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಸರ್ಕಾರದ ಅಂಕಿ-ಅಂಶಗಳು ಹೇಳಿವೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಒಟ್ಟು 348.97 ಕೋಟಿ ಪ್ರಯಾಣಿಕರು ಬಸ್ ಪ್ರಯಾಣ ಮಾಡಿದ್ದು, ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಿದೆ.
ಅಲ್ಲದೆ, ಈವರೆಗೆ ಒಟ್ಟು 4,836 ಕೋಟಿ ರು. ಮೌಲ್ಯದ ಉಚಿತ ಟಿಕೆಟ್ಗಳನ್ನು ನೀಡಲಾಗಿದೆ. ಅಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಲಿದ್ದು, ಅದರಲ್ಲಿ ಈಗಾಗಲೇ 3 ಸಾವಿರ ಕೋಟಿ ರು.ಗೂ ಹೆಚ್ಚಿನ ಮೊತ್ತವನ್ನು ನಿಗಮಗಳಿಗೆ ಹಂಚಿಕೆ ಮಾಡಲಾಗಿದೆ.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com