ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಪಡಿಸಲು ಚುನಾವಣಾ ಆಯೋಗ ಅಂತಿಮ ಹಂತದ ತಯಾರಿ ಮಾಡಿಕೊಂಡಿದೆ. ಅದರಂತೆ ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಉಪ ಚುನಾವಣೆಗೆ ಈ ವಾರವೇ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ರಾಜಕೀಯ ಪಕ್ಷಗಳು, ಆಕಾಂಕ್ಷಿಗಳಲ್ಲೂ ಹುರುಪು ಹೆಚ್ಚುತ್ತಿದೆ.
ನಾನೇ ಅಭ್ಯರ್ಥಿ: ಎಚ್‌ಡಿಕೆ, ಡಿಕೆಶಿ!
ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರು ‘ನಾನೇ ಅಭ್ಯರ್ಥಿ’, ‘ನಾನೇ ಅಭ್ಯರ್ಥಿ’ ಎಂದು ಹೇಳುವ ಮೂಲಕ ಭಾವನಾತ್ಮಕ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಉಪಕದನದ ಅಭ್ಯರ್ಥಿ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.