Top Newsರಾಜ್ಯಸುದ್ದಿ

ಕಸಾಪ ಅಭಿವೃದ್ಧಿಗೆ 35 ಕೋಟಿ ಅನುದಾನ ನೀಡಿ: ಮಹೇಶ ಜೋಶಿ ಮನವಿ

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್​​ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ವಾರ್ಷಿಕವಾಗಿ 35 ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಜೋಶಿ, ಸ್ವಾತಂತ್ರ್ಯಾ ನಂತರ ಚುನಾಯಿತ ಸರ್ಕಾರಗಳು ಪರಿಷತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಅನುದಾನ ನೀಡುತ್ತಾ ಬಂದಿದ್ರು. ಇನ್ನು 2017-18ರಲ್ಲಿ 12 ರೂ. ಕೋಟಿ ಅನುದಾನ ನೀಡಿದ್ದು, ಪ್ರಸ್ತುತ ಸಂದರ್ಭದಲ್ಲಿ ಬೆಲೆ ಏರಿಕೆಯಾಗಿರುವುದನ್ನು ಪರಿಗಣಿಸಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಪರಿಷತ್ತಿನ ವ್ಯಾಪ್ತಿ ಕೂಡ ಸವಿಸ್ತಾರವಾಗಿದ್ದು, ಜಿಲ್ಲಾ ಮಟ್ಟ ಮಾತ್ರವಲ್ಲದೆ ತಾಲ್ಲೂಕು, ಹೋಬಳಿ ಮಟ್ಟದಲ್ಲೂ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿವೆ. ಪರಿಷತ್ತಿನ ನಿರ್ವಹಣೆ, ಪುಸ್ತಕ ಪ್ರಕರಟಣೆ, ವಿಚಾರ ಸಂಕೀರಣ, ಕಾರ್ಯಾಗಾರಗಳು, ಸ್ಥಗಿತಗೊಂಡಿರುವ ನಿಘಂಟು ಯೋಜನೆ ಮುಂದುವರಿಕೆ ಸೇರಿ ಪರಿಷತ್ತಿನ ಕಾರ್ಯಚಟಿಕೆಗಳಿಗೆ 35 ಕೋಟಿ ಅನುದಾನದ ಅಗತ್ಯವಿದೆ. ಬಜೆಟಿನಲ್ಲಿ ಈ ಮೊತ್ತವನ್ನು ಕಾಯ್ದಿರಿಸಬೇಕು ಎಂದು ಮನವಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button