ಲಕ್ನೋ : ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿರುವ ಕುಂಭ ಮೇಳಕ್ಕೆ ಉತ್ತರ ಪ್ರದೇಶ ಸಜ್ಜಾಗಿದೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು, ಯಾತ್ರಿಕರು ಆಗಮಿಸುತ್ತಿದ್ದಾರೆ. ಸಾಧು-ಸಂತರು ಕುಂಭ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇಳಕ್ಕೆ ಸಕಲ ಸಿದ್ಧತೆ ನಡೆದಿದೆ. ಕುಂಭ ಮೇಳಕ್ಕೆ ಛೋಟು ಬಾಬಾ ಅವರು ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ.
32 ವರ್ಷಗಳಿಂದ ಸ್ನಾನ ಮಾಡದ ಗಂಗಾಪುರಿ ಮಹಾರಾಜರು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ. ಗಂಗಾಪುರಿ ಮಹಾರಾಜ್ ಅವರು ಛೋಟು ಬಾಬಾ ಅಸ್ಸಾಂನ ಕಾಮಾಖ್ಯ ಪೀಠದವರಾಗಿದ್ದಾರೆ.
‘12 ವರ್ಷಗಳ ನಂತರ ಮಹಾಕುಂಭವನ್ನು ಆಚರಿಸಲಾಗುತ್ತಿದ್ದು, ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಅನಾಹುತಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ..


