ರಾಜಕೀಯ

ಯತ್ನಾಳ್ ಕಾಂಗ್ರೆಸ್​ ಸೇರ್ಪಡೆಗೆ ಅರ್ಜಿ ಹಾಕಿಲ್ಲ; ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದ್ರು ಸಹ ಕಾಂಗ್ರೆಸ್​ಗೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು,  ಯತ್ನಾಳ್ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವ ಕುರಿತು ಪ್ರತಿಕ್ರಿಯಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಿಲ್ಲ. ಅರ್ಜಿ ಹಾಕಿದರೇ ನೋಡೋಣ, ಯತ್ನಾಳ್ ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಅವರು ಕಾಂಗ್ರೆಸ್‌ಗೆ ಬರುವುದು ಕಷ್ಟ, ಯಾರನ್ನು ಸೇರ್ಪಡೆ ಮಾಡಬೇಕು ಎಂಬುದು ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅವರೇನು ನಮ್ಮನ್ನು ಹುಡುಕಿ ಬಂದಿಲ್ಲ. ಒಂದು ವೇಳೆ ಬಂದರೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಆದರೆ ಇವೆಲ್ಲವೂ ಅಷ್ಟೊಂದು ಸರಳವಾಗಿಲ್ಲ. ಅವರು ಬಹಳಷ್ಟು ಬಾರಿ ನಮ್ಮನ್ನು ಬೈದಿದ್ದಾರೆ. ಒಂದು ಜನಾಂಗವನ್ನು ಬೈದಿದ್ದಾರೆ. ಹಾಗಾಗಿ ಅಷ್ಟೊಂದು ಸರಳವಾಗಿ ಆಗುವುದಿಲ್ಲ ಎಂದರು.

Comments (0)

Your email address will not be published. Required fields are marked *

Back to top button