ರಾಜ್ಯಸುದ್ದಿ

ಲಾರಿಗೆ ಬೆಂಕಿ ಹೊತ್ತಿಕೊಂಡು 40 ಬೈಕ್​ಗಳು ಸುಟ್ಟು ಕರಕಲು

ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೈಕ್​​​ಗಳನ್ನ ಹೊತ್ತು ಸಾಗುತ್ತಿದ್ದ ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.. ಬೆಂಕಿಯ ಕೆನ್ನಲಿಗೆಗೆ ಸಿಕ್ಕಿ ಯಮಹಾ ಕಂಪನಿಯ 40 ಬೈಕ್​ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.. ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಚಾಲಕ ಕೆಳಗೆ ಇಳಿದು ಪ್ರಣಾಪಾಯದಿಂದ ಪಾರಾಗಿದ್ದಾನೆ..

ಚೆನೈಯಿಂದ ಬಳ್ಳಾರಿಗೆ ಬೈಕ್‌ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು.

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button