Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop News40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ...

40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ ಸಿಎಂಗೆ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಆರೋಪ ಕೇಳಿಬಂದ ಬೆನ್ನಲ್ಲೇ ತನಿಖಾ ವರದಿಯನ್ನು ಕೊಡಲು ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಆಯೋಗವನ್ನು ರಚಿಸಲಾಗಿತ್ತು.

ಇದೀಗ ನಿವೃತ್ತ ನ್ಯಾ.ಹೆಚ್.ಎನ್. ನಾಗಮೋಹನ್ ದಾಸ್ ಆಗೋಗ ತನಿಖೆ ನಡೆಸಿ ಸಿದ್ದ ಪಡಿಸಿದ ವರದಿಯನ್ನ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿಂದು ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. 40% ಕಮೀಷನ್ ಆರೋಪ ಅನುಬಂಧಗಳೊಂದಿಗೆ 20 ಸಾವಿರ ಪುಟಗಳ ವರದಿಗಳನ್ನು ಸಿಎಂಗೆ ಸಲ್ಲಿಕೆ ಮಾಡಿದೆ

ಜೆಪಿಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ಕಾಮಗಾರಿಗಳಲ್ಲಿ ಶೇ.40 ಕಮಿಷನ್‌ ಇದೆ ಎಂದು ರಾಜ್ಯ ಗುತ್ತಿಗೆದಾರರ ಸಂಘವು ಗಂಭೀರವಾಗಿ ಆರೋಪಿಸಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ 26-7-2019 ರಿಂದ 31.03.2023ರ ವರೆಗೆ ನಡೆದಿರೋ ಕಾಮಗಾರಿಗಳ ಬಗ್ಗೆ ತನಿಖೆ ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು

ಈ ಹಿನ್ನೆಲೆಯಲ್ಲಿ ವೈಜ್ಞಾನಿಕವಾಗಿ ರಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನ ಆಯ್ಕೆ ಮಾಡಿಕೊಂಡು ಆಯೋಗ ತನಿಖೆ ನಡೆಸಿತ್ತು. ಈ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಹಾಗೂ ಎಲ್ಲಾ ಮೊತ್ತದ ಕಾಮಗಾರಿಗಳನ್ನ ಪರಿಗಣಿಸಿ ಆಯೋಗ ತನಿಖೆ ನಡೆಸಿದೆ ಎಂದು ವರದಿಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments