Thursday, November 20, 2025
21.7 C
Bengaluru
Google search engine
LIVE
ಮನೆ#Exclusive Newsಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​

ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ. ಈ ಪಂದ್ಯದ ಟಾಸ್ ಪ್ರಕ್ರಿಯೆ ಆಸ್ಟ್ರೇಲಿಯಾ ಸಮಯ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಅಂದರೆ ಭಾರತೀಯ ಕಾಲಮಾನ 4.30 ಕ್ಕೆ ಟಾಸ್ ಪ್ರಕ್ರಿಯೆ ಮುಗಿಯಲಿದೆ. ಇನ್ನು ಭಾರತದಲ್ಲಿ ಪಂದ್ಯವನ್ನು ಮುಂಜಾನೆ 5 ಗಂಟೆಯಿಂದ ಲೈವ್ ವೀಕ್ಷಿಸಬಹುದು.

ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯವು ಬೆಳಿಗ್ಗೆ 9.30 ಕ್ಕೆ (ಭಾರತದಲ್ಲಿ 5.30 ಕ್ಕೆ) ಆರಂಭವಾಗಿತ್ತು. ಆದರೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು ಬೆಳಿಗ್ಗೆ 10.30 ಕ್ಕೆ (ಭಾರತದಲ್ಲಿ 5 ಗಂಟೆ) ಆರಂಭಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸೆಷನ್ ಬೆಳಿಗ್ಗೆ 5 am IST ಗಂಟೆಯಿಂದ 7 am IST ಗಂಟೆಯವರೆಗೆ ನಡೆಯಲಿದೆ.

ದ್ವಿತೀಯ ಸೆಷನ್ ಶುರುವಾಗುವುದು ಭಾರತೀಯ ಕಾಲಮಾನ 7.40 am ರಿಂದ,  9.40 am ವರೆಗೆ ಎರಡನೇ ಸೆಷನ್ ನಡೆಯಲಿದೆ. ಇದಾದ ಬಳಿಕ ಟೀ ಬ್ರೇಕ್ ಇರಲಿದೆ. ಆ ಬಳಿಕ 10 am ರಿಂದ 12 pm ರವರೆಗೆ ಮೂರನೇ ಸೆಷನ್ ಜರುಗಲಿದೆ. ಅಂದರೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಯಾಗುವಷ್ಟರಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿಯಲಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments